ವಿಟ್ಲ: ಬೊಲೆರೋ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲು ಎಂಬಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ನಡುವೆ ಅಪಘಾತ ಸಂಭವಿಸಿದೆ. ಬೈಕ್ ಜೀಪಿನಡಿಗೆ ನುಗ್ಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಬೈಕ್ ನಲ್ಲಿದ್ದ ಕನ್ಯಾನ ನಿವಾಸಿಗಳಾದ ಸವಾರ, ಮಹಿಳೆ ಮತ್ತು ಮಗು ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
