ವಿಟ್ಲ: ಪಿಕಪ್ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸೆ.23 ರಂದು ವಿಟ್ಲ ಸಮೀಪದ ಕೇಪು ಮೈರ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಬದಿಯಡ್ಕ ನಿವಾಸಿ ಸಂದೇಶ್ ಚೆಟ್ಟಿಗಾರ್ ಎಂದು ಗುರುತಿಸಲಾಗಿದೆ.
ಪಲ್ಸರ್ ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಗಂಭೀರ ಗಾಯಗೊಂಡ ಸಂದೇಶ್ ರವರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.