ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಯೋಗ ಕೇಂದ್ರ ಪುತ್ತೂರು ಇದರ ಆಶ್ರಯದಲ್ಲಿ, ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ನಡೆದ ‘ಯೋಗ-ಜೀವನ’ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸೆ.25 ರಂದು ಬೆಳಿಗ್ಗೆ ಗಂಟೆ 8 ರಿಂದ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ರವರು ವಹಿಸಲಿದ್ದಾರೆ.
ಪ್ರಧಾನ ಭಾಷಣಕಾರರಾಗಿ ಸ್ವಾಮಿ ವಿವೇಕಾನಂದ ಯೋಗ ಅನುಸಂದಾನ ಸಂಸ್ಥಾನಮ್ ನ ವಿಶ್ರಾಂತ ಉಪಕುಲಪತಿಗಳಾದ ಡಾ. ಕೋಟೆಮನೆ ರಾಮಚಂದ್ರ ಭಟ್ ರವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ರವರು ಆಗಮಿಸಲಿದ್ದಾರೆ.