ಮಂಗಳೂರು: ಭಯೋತ್ಪಾದಕ ಸಂಘಟನೆಗಳ ಜೊತೆಗೆ ನಂಟು ಹೊಂದಿರುವ ಆರೋಪ ಮೇರೆಗೆ ಬಂಧಿತನಾಗಿರುವ ಮಾಝ್ ಅಹಮ್ಮದ್ ನ ತಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶಂಕಿತ ಆರೋಪಿ ಮಾಝ್ ಮುನೀರ್ ಅಹಮದ್ ತಂದೆ ಮುನೀರ್ ಅಹ್ಮದ್ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಂಜೆ 5 ಗಂಟೆಗೆ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಮೃತ ಮುನೀರ್ ಅಹ್ಮದ್ ರವರು ತೀರ್ಥಹಳ್ಳಿಯ ಮಾಜಿ ಪುರಸಭಾ ಸದಸ್ಯ ಕಾಂಗ್ರೆಸ್ ಮುಖಂಡ ದಿವಂಗತ ಸಾಬ್ಜಾನ್ ಸಾಹೇಬರವರ ಮಗನಾಗಿದ್ದರು. ಮೃತದೇಹವನ್ನು ರಾತ್ರಿ ತೀರ್ಥಹಳ್ಳಿಗೆ ತರಬಹುದೆಂದು ಕುಟುಂಬ ಮೂಲಗಳು ತಿಳಿಸಿವೆ.
ಮುನೀರ್ ಅಹಮ್ಮದ್ ರವರ ಮನೆ ತೀರ್ಥಹಳ್ಳಿ ಮೀನು ಮಾರ್ಕೆಟ್ ಹತ್ತಿರ ಸೊಪ್ಪುಗುಡ್ಡೆ ಎಂಬಲ್ಲಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಂಗಳೂರಿನಲ್ಲಿ ಮನೆ ಮಾಡಿ ನೆಲೆಸಿದ್ದರು ಎನ್ನಲಾಗಿದೆ..