ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ,ದ. ಕ. ಜಿ. ಪ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇದರ ಸಹಯೋಗದಿಂದ ಸೆಪ್ಟೆಂಬರ್ 22 ರಂದು ನಡೆದ ಪುತ್ತೂರು ತಾಲೂಕು ಮಟ್ಟದ 14 ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆಯ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕಯಾಗಿದೆ.

ಇವರಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ. ವೆನಿಶಾ ಬಿ. ಎಸ್,ಶಿಕ್ಷಕಿ ಭಗಿನಿ. ವಿನೀತಾ ಪಿರೇರ ,ಶಿಕ್ಷಕಿ ವಿಲ್ಮಾ ಫರ್ನಾಂಡಿಸ್, ಭಗಿನಿ. ಡೈನ ಸಿಕ್ವೇರಾ ಮಾರ್ಗದರ್ಶನದಲ್ಲಿ ಶಾಲಾ ಸಹಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿರುತ್ತಾರೆ. ಸೆ.26 ರಂದು ಬೆಳ್ತಂಗಡಿ ತಾಲೂಕಿನ ಪಡಂಗಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
