ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಚರಣೆಯಲ್ಲಿ ಪ್ರಯಾಣಿಕರೊಬ್ಬರಿಂದ 15,36,120 ಲಕ್ಷ ರೂ ಮೌಲ್ಯದ 306.000 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕ ಬಂಟ್ವಾಳ ಮೂಲದವರಾಗಿದ್ದು, ದುಬೈನಿಂದ ಬಂದಿಳಿದ ಈತ ತನ್ನ ವಸ್ತ್ರ ಹಾಗೂ ಒಳಉಡುಪಿನಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.
ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ..