ಪುತ್ತೂರು: ಸ್ವಚ್ಛತೆ ಕೇವಲ ಪೌರಕಾರ್ಮಿಕರು ಮಾಡುವ ಕೆಲಸವಲ್ಲ ಎಲ್ಲಾ ಜನರ ಸಹಭಾಗಿತ್ವ ಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆ ಒಂದು ದಿನದ ಕಾರ್ಯಕ್ರಮವಾಗದೆ ನಿರಂತರವಾಗಿರಲಿ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದರು.
ನಗರಸಭೆ ವತಿಯಿಂದ ಸ್ವಚ್ಛ ಪುತ್ತೂರು ಪರಿಕಲ್ಪನೆಯಲ್ಲಿ ಎ.7ರಂದು ಕಲ್ಲೇಗದಿಂದ ದರ್ಬೆ ಅಶ್ವಿನಿ ವೃತ್ತದ ತನಕ ನಡೆದ ಸ್ವಚ್ಛತಾ ಆಂದೋಲನವನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು. ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ನಗರಸಭಾ ಸದಸ್ಯರು, ಪೌರಾಯುಕ್ತೆ ರೂಪಾ ಶೆಟ್ಟಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಸೇರಿದಂತೆ ನಗರಸಭೆ ಸಿಬ್ಬಂದಿಗಳು, ಪೌರ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.