ಪುತ್ತೂರು: ಮನೆಯ ಮುಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಪಚ್ಚನಾಡಿ ವೈದ್ಯನಾಥ ನಗರ ನಿವಾಸಿ ರಮೇಶ್ ಆರ್. ಬಂಧಿತ ಆರೋಪಿ.
ರಮೇಶ್ ಪುತ್ತೂರಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮನೆಯ ಮುಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದರು.
ಜಾಮೀನು ಪಡೆದು ಬಳಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯ ಆರೋಪಿಯ ಮೇಲೆ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು
ನಗರ ಠಾಣಾ ಪೊಲೀಸರು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ, ಡಿವೈಎಸ್ಪಿ ಡಾ. ಹೀರಯ್ಯ ಹಿರೇಮಠ ಅವರ ನಿರ್ದೇಶನದಲ್ಲಿ, ಪುತ್ತೂರು ನಗರ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಮತ್ತು ಪ್ರಭು ರವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.