ಪುತ್ತೂರು: ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಹಾಗೂ ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಆಶ್ರಯದಲ್ಲಿ, ಎಸ್.ಎಸ್.ಎಲ್.ಸಿ.ಯಲ್ಲಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ ಹಾಗೂ ಗಾಂಧಿ ಜಯಂತಿ’ ಆಚರಣೆಯು ಅ.2 ರಂದು ಬೆಳಗ್ಗೆ 10.30 ಕ್ಕೆ ಮುಕ್ಕೂರು ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಅಬುದಾಬಿಯ ನಿವೃತ್ತ ಇಂಜಿನಿಯರ್ ಉಮೇಶ್ ರಾವ್ ಕೊಂಡೆಪ್ಪಾಡಿ ಉದ್ಘಾಟಿಸಲಿದ್ದಾರೆ. ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ನೇಸರ ಯುವಕ ಮಂಡಲದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ಳಾರೆ ಆರಕ್ಷಕ ಠಾಣೆಯ ಉಪನಿರೀಕ್ಷಕ ಸುಹಾಸ್ ಆರ್. ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಿದ್ದಾರೆ. ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಅಭಿನಂದನಾ ಮಾತುಗಳನ್ನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ ಕಂಡಿಪ್ಪಾಡಿ, ಇಂಜಿನಿಯರ್ ನರಸಿಂಹ ತೇಜಸ್ವಿ ಕಾನಾವು, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ರೈ ಕಾಪು, ಪೆರುವಾಜೆ ಗ್ರಾ.ಪಂ.ಪಿಡಿಓ ಜಯಪ್ರಕಾಶ್ ಅಲೆಕ್ಕಾಡಿ, ಮುಕ್ಕೂರು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಜಯಂತ ಗೌಡ, ಮುಕ್ಕೂರು ಶಾಲಾ ಮುಖ್ಯಗುರು ವಸಂತಿ, ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು ಆಗಮಿಸಲಿದ್ದಾರೆ.

