ಮಂಗಳೂರು : ನಗರದಲ್ಲಿ ಅಹಿತಕರ ಘಟನೆ ನಡೆಯಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸರು ಕೆಲ ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಎನ್ ಐಎ ತಂಡ ಕೆಲ ದಿನಗಳ ಹಿಂದೆ ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದರಿಂದ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರಿನಲ್ಲಿ ಪೊಲೀಸರು ಸುಮಾರು ಹತ್ತಕ್ಕೂ ಹೆಚ್ಚು ಮಂದಿಯನ್ನು, ಸೆಕ್ಷನ್ 107 151 ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ.
