ಆಮ್ ಆದ್ಮಿ ಪಾರ್ಟಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ತನ್ನ ನಾಗರಿಕ ಕುಂದುಕೊರತೆ ಪೋರ್ಟಲ್ ಅನ್ನು ಪ್ರಾರಂಭಿಸುವ ಮೂಲಕ ನಾಗರಿಕರ ಅಗತ್ಯತೆಗಳನ್ನು ಪರಿಹರಿಸಲು ದೂರದೃಷ್ಟಿಯ ಉಪಕ್ರಮವನ್ನು ತೆಗೆದುಕೊಳ್ಳುತ್ತಿದೆ.
ನಾಗರಿಕರು ಈ ಪೋರ್ಟಲ್‌ಗೆ ಭೇಟಿ ನೀಡಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು. ಎಎಪಿಯ ಜಿಲ್ಲಾ ತಂಡವು ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಗತ್ಯವಿದ್ದರೆ, ಎಎಪಿ ಆಡಳಿತದ ಮುಂದೆ ಪ್ರಾತಿನಿಧ್ಯವನ್ನು ನೀಡುತ್ತದೆ ಮತ್ತು ನಾಗರಿಕರ ಹಕ್ಕುಗಳಿಗಾಗಿ ಹೋರಾಡುತ್ತದೆ.
‘ನಾಗರಿಕ ಕುಂದುಕೊರತೆ ಪೋರ್ಟಲ್’ ಅ.2 ರ ಭಾನುವಾರದಂದು ಮಂಗಳೂರಿನ ಬಿಜೈ ಚರ್ಚ್ ಹಾಲ್‌ನಲ್ಲಿ ಬೆಳಿಗ್ಗೆ 10:30ಕ್ಕೆ ಲೋಕಾರ್ಪಣೆಗೊಳ್ಳಲಿದೆ.
ಬಾಂಬೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಸಲ್ಡಾನ್ಹಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.