ಪುತ್ತೂರು: ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕರಿಗೆ ಪುತ್ತೂರು ತಹಶೀಲ್ದಾರ್ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಶಾಂತಿ ಕದಡುವಂತಹ ಪ್ರಕರಣ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಾಬೀರ್ ರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ತಾಲೂಕು ದಂಡಾಧಿಕಾರಿಯಾಗಿರುವ ತಹಶೀಲ್ದಾರ್ ರವರ ಮುಂದೆ ಹಾಜರುಪಡಿಸಿದ್ದರು.
ತಹಶೀಲ್ದಾರ್ ವಿಚಾರಣೆ ನಡೆಸಿ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.



























