ಪುತ್ತೂರು: ನಿನ್ನೆ ಹಾರಾಡಿಯಲ್ಲಿ ಬೈಕ್ ಮತ್ತು ಆಟೋ ರಿಕ್ಷಾಗಳ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಬೈಕ್
ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಕೋಲ್ಪೆ ನಿವಾಸಿ ಟ್ಯಾಂಕರ್ ಚಾಲಕ ವಸಂತ್ ಎಂದು ಗುರುತಿಸಲಾಗಿದೆ.

ನಿನ್ನೆ ಹಾರಾಡಿ ಸಮೀಪ ಎರಡು ಆಟೋ ರಿಕ್ಷಾಗಳು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಕೋಲ್ಪೆ ನಿವಾಸಿ ವಸಂತ್ ರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಇಂದು ವಸಂತ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ತಂದೆ ತಿಮ್ಮಯ್ಯ ಸಪಲ್ಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
