ಪುತ್ತೂರು: ಬೈಕ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನನ್ನು ಬೀಟ್ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕೊಡಿಪ್ಪಾಡಿಯ ನಿತಿನ್ ಕುಮಾರ್ ಎಂಬವರು ಪಡೀಲ್ ಸಮೀಪ ಬೈಕ್ ನಿಂದ ಬಿದ್ದು ಅಸ್ವಸ್ಥಗೊಂಡಿದ್ದು, ಇದನ್ನು ಗಮನಿಸಿದ ಬೀಟ್ ಪೊಲೀಸರು ಕೂಡಲೇ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು.

ನಿತಿನ್ ರವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ..
ನಿತಿನ್ ಬೈಕ್ ಸ್ಕಿಡ್ ಆಗಿ ಬಿದ್ದರೇ ಅಥವಾ ಯಾವುದೋ ವಾಹನದವರು ಗುದ್ದಿ ಹೋದದ್ದೆ ಎಂಬ ಮಾಹಿತಿ ತನಿಖೆ ನಂತರವಷ್ಟೇ ತಿಳಿಯಬೇಕಿದೆ.
