ಪುತ್ತೂರು: ಸಾಮಾನ್ಯಸಭೆ ನಡೆಯುತ್ತಿದ್ದ ವೇಳೆ ಪಂಚಾಯತ್ ಸದಸ್ಯ ಮತ್ತು ಸಿಬ್ಬಂದಿಯ ಪತಿಯ ನಡುವೆ ಗಲಾಟೆ ನಡೆದ ಘಟನೆ ಸೆ.29 ರಂದು ಹಿರೇಬಂಡಾಡಿಯಲ್ಲಿ ನಡೆದಿದೆ.
ಹಿರೇಬಂಡಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಸದಸ್ಯ ಸತೀಶ್ ಎನ್. ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿರೇಬಂಡಾಡಿ ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ‘ನಾನು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಕೆಲವರು, ಜನ ಬಿಟ್ಟು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ., ಪಂಚಾಯತ್ ಸಿಬ್ಬಂದಿಗಳು ರಾಜಕೀಯ ಮಾಡುತ್ತಿದ್ದು, ಈ ಹಿನ್ನೆಲೆ ಪಂಚಾಯತ್ ಮಹಿಳಾ ಸಿಬ್ಬಂದಿಯ ಪತಿಯಿಂದ ನನ್ನ ಮೇಲೆ ಹಲ್ಲೆಗೈದಿದ್ದಾರೆ’ ಎಂದು ಸತೀಶ್ ಎನ್. ಶೆಟ್ಟಿ ರವರು ಆರೋಪಿಸಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.




























