ಪುತ್ತೂರು: ಸಾಮಾನ್ಯಸಭೆ ನಡೆಯುತ್ತಿದ್ದ ವೇಳೆ ಮನೆ ತೆರಿಗೆ ಕಟ್ಟಲು ಬಂದ ವ್ಯಕ್ತಿಯೋರ್ವರಿಗೆ ಪಂಚಾಯತ್ ಸದಸ್ಯ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಸೆ.29 ರಂದು ಹಿರೇಬಂಡಾಡಿಯಲ್ಲಿ ನಡೆದಿದೆ.
ಹಿರೇಬಂಡಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಸದಸ್ಯ ಸತೀಶ್ ಎನ್. ಶೆಟ್ಟಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನೋಣಯ್ಯ ರವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಿರೇಬಂಡಾಡಿ ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯಸಭೆ ನಡೆಯುತ್ತಿದ್ದ ವೇಳೆ ತೆರಿಗೆ ಕಟ್ಟಲು ಬಂದಾಗ ‘ನಿನಗೆ ಕಂಪ್ಲೇಂಟ್ ಕೊಟ್ಟು ಏನು ಮಾಡಲು ಆಗುತ್ತೇ ಎಂದು ಹೇಳಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿದ್ದಾರೆ.
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಯುವರಾಜ್, ಮುಕುಂದ, ಸುರೇಶ್ ಅತ್ರಮಜಲು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಮುಕುಂದ್, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುರೇಶ್ ಅತ್ರಮಜಲು, ಪುಣಚ ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್ ರವರು ಆಸ್ಪತ್ರೆಗೆ ಭೇಟಿ ನೀಡಿದರು.