ಬಂಟ್ವಾಳ: ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40) ಎಂಬವರು ಗಾಯಗೊಂಡ ವ್ಯಕ್ತಿ.
ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬಂಟ್ವಾಳ ಪೇಟೆಯಾಗಿ ಬೆಳ್ತಂಗಡಿಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ.
ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್ ಭಾಗದಲ್ಲಿ ಧರ್ಮಸ್ಥಳ ರಸ್ತೆಗೆ ಕ್ರಾಸಿಂಗ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
