ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯದ ಕಡೆ ಪಿಎಫ್‌ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಮಿತ್ತೂರಿನಲ್ಲಿರುವ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಯುವಕರಿಗೆ ಪಿಎಫ್‌ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿಯನ್ನು ಎನ್ಐಎ ಕಲೆ ಹಾಕಿದೆ ಎಂದು ತಿಳಿದು ಬಂದಿದೆ.
2007 ರಿಂದ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಲಾಗುತ್ತಿತ್ತು, ಈ ಸಂಬಂಧ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ ಈ ವಿಚಾರವಾಗಿ ವಿಸ್ತೃತ ತನಿಖೆಯಲ್ಲಿ ತೊಡಗಿರುವ ಎನ್ಐಎ ಬಂಧಿತರಿಂದ ಮತ್ತಷ್ಟು ಸತ್ಯ ವಿಚಾರಗಳನ್ನು ಹೊರಗೆಳೆಯಲಿದ್ದಾರೆ ಎನ್ನಲಾಗುತ್ತಿದೆ.
ಆರ್.ಎಸ್. ಎಸ್ ಮುಖಂಡ ಶರತ್ ಮಡಿವಾಳ ಹಂತಕರಿಗೆ ಇದೇ ಹಾಲ್ ನಲ್ಲಿ ಟ್ರೈನಿಂಗ್ ಕೊಡಲಾಗಿತ್ತು ಎಂಬ ಆರೋಪವಿದ್ದು, ಹಾಲ್ ನಲ್ಲಿ ಮೀಟಿಂಗ್ ನಡೆಸಿ ಹತ್ಯೆಗೆ ಮಾಸ್ಟರ್ ಪ್ಲಾನ್ ಮಾಡಿದ್ದರು ಎನ್ನಲಾಗುತ್ತಿದೆ. ಅದೇ ರೀತಿ ಪ್ರವೀಣ್ ನೆಟ್ಟಾರು ಹತ್ಯೆಗೂ ಮುನ್ನ ಮೀಟಿಂಗ್ ನಡೆಸಿ ಹತ್ಯೆಗೆ ಮಾಸ್ಟರ್ ಪ್ಲಾನ್ ಮಾಡಿದ್ದರು ಎನ್ನಲಾಗುತ್ತಿದೆ.
ಅಷ್ಟೇ ಅಲ್ಲದೇ ಇನ್ನೆರಡು ದಿನದಲ್ಲಿ ಫ್ರೀಡಂ ಕಮ್ಯೂನಿಟಿ ಹಾಲ್ ಸೀಜ್ ಮಾಡಲಾಗುತ್ತದೆ ಎಂಬ ಮಾಹಿತಿಯೂ ಲಭ್ಯವಾಗಿದೆ.
