ಬೆಳ್ತಂಗಡಿ: ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ಗ್ರಾಮದ ಅಶ್ವತ್ಥ ನಗರದ ನಿವಾಸಿ ಸುನೀತಾ ಮಂಜುನಾಥ್ 2020-21ರಲ್ಲಿ ವಿಜಯಪುರದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದರು ಮತ್ತು ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಐ.ಇ.ಸಿ ಸಂಯೋಜಕರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಎಪ್ರಿಲ್ 9ರಂದು ಹುಬ್ಬಳ್ಳಿಯಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಪ್ರಸ್ತುತ ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.