ಬೆಳ್ತಂಗಡಿ: ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಾರಾವಿ ಅರಸಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23) ಎಂದು ಗುರುತಿಸಲಾಗಿದೆ.
ಸಂತೋಷ್ ಅವರು ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























