ವಿಟ್ಲ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬುಡೋಳಿ ಸಮೀಪ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.





























