ಮಂಗಳೂರು: ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸಲು ಯತ್ನಿಸಿದ 38,53,200 ರೂ. ಮೌಲ್ಯದ 741 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಆಗಮಿಸಿದ ಕಾಸರಗೋಡು ನಿವಾಸಿ ಚಿನ್ನದ ಪೌಡರನ್ನು ಗಮ್‌ನಲ್ಲಿ ಮಿಕ್ಸ್ ಮಾಡಿ ಅದನ್ನು ಉಂಡೆ ಮಾಡಿ ಗುದದ್ವಾರದೊಳಗಿಟ್ಟು ಸಾಗಾಟ ಮಾಡಲು ಯತ್ನಿಸಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾನೂನು ಕ್ರಮ ಜರಗಿಸಲಾಗುವುದು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

























