ಬಂಟ್ವಾಳ: ಅಪರಿಚಿತ ಮಹಿಳೆಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನೇತ್ರಾವತಿ ನದಿಯಲ್ಲಿ ನಡೆದಿದೆ.

ಸರಪಾಡಿ ಗ್ರಾಮದ sez ನೀರಿನ ಸ್ಥಾವರಾದ ಬಳಿ ನೇತ್ರಾವತಿ ನದಿಯಲ್ಲಿ ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆಯ ಮೃತದೇಹವು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ..

























