ಕಡಬ: ತಾಲೂಕಿನ ನೆಲ್ಯಾಡಿ ಸಮೀಪದ ಮೊರಂಕಲ ನಿವಾಸಿ ಶೆಬಿನ್(25) ಅ.8 ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಲವು ವರ್ಷಗಳಿಂದ ನೆಲ್ಯಾಡಿಯಲ್ಲಿ ಪ್ರೊಫೆಷನಲ್ ಕೊರಿಯರನ್ನು ನಡೆಸುತ್ತಿದ್ದ ಶೆಬಿನ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಮೃತರು ತಾಯಿ ಎಲ್ಸಮ್ಮ, ಸಹೋದರ ಲಿಜೊ ರನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ ಸ್ಟೇಬಲ್ ಬಾಲಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

























