ಸುಬ್ರಹ್ಮಣ್ಯ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ 16 ಜನರ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.
ಸುಬ್ರಹ್ಮಣ್ಯ ಸಮೀಪದ ಅಪ್ರಾಪ್ತ ಬಾಲಕಿ 5ನೇ ತರಗತಿಯಲ್ಲಿ ಓದುತ್ತಿರುವಾಗಿನಿಂದ ಈಗ 14 ವರ್ಷದ ವರೆಗೆ 16 ಜನ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ 16 ಜನರ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..

























