ಕಾಸರಗೋಡು: ಅನಂತಪುರ ಅನಂತಪದ್ಮನಾಭ ದೇವಸ್ಥಾನದ ಕೆರೆಯ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿದ್ದ ‘ಬಬಿಯಾ’ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದ್ದು, ಕ್ಷೇತ್ರದ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.

ಈವರೆಗೆ ಯಾರೊಬ್ಬರಿಗೂ ಉಪಟಳ ಮಾಡದ ದೇವರ ಮೊಸಳೆ, ಇತ್ತೀಚಿನ ದಿನದಲ್ಲಿ ವಯೋಸಹಜ ಅನಾರೋಗ್ಯಕ್ಕೆ ಒಳಾಗಾಗಿತ್ತು, ಅದಕ್ಕೆ ಚಿಕಿತ್ಸೆ ಕೂಡ ನಡೆಯುತ್ತಿತ್ತು, ಈ ಮಧ್ಯೆ ನಿನ್ನೆ ರಾತ್ರಿ ಬಬಿಯಾ ದೇವರ ಪಾದ ಸೇರಿದೆ. ಪರಿಸರದ ಭಕ್ತರು ಮೊಸಳೆಯನ್ನು ನೀರಿನಿಂದ ಮೇಲೆತ್ತಿ ಕ್ಷೇತ್ರದ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಬಬಿಯಾ ಅಗಲಿರೋದು ಭಕ್ತರಲ್ಲಿ ತೀವ್ರ ಬೇಸರವನ್ನುಂಟು ಮಾಡಿದೆ.



























