ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವಿನ ಎನ್ಕೌಂಟರ್ನಲ್ಲಿ ಭಾರತೀಯ ಸೇನೆಯ ಶ್ವಾನವೊಂದು ಸೋಮವಾರ ತೀವ್ರವಾಗಿ ಗಾಯಗೊಂಡಿದೆ.
ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ‘ಜೂಮ್’ ಎಂಬ ಭಾರತೀಯ ಸೇನೆಯ ಶ್ವಾನಕ್ಕೆ ವಹಿಸಲಾಗಿತ್ತು. ಆ ಶ್ವಾನ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಆ ಶ್ವಾನದ ಮೇಲೆ 2 ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ಶ್ವಾನಕ್ಕೆ ಗಂಭೀರವಾದ ಗಾಯಗಳಾಗಿವೆ.
ತನ್ನ ಮೈಮೇಲೆ ಗುಂಡಿನ ದಾಳಿ ನಡೆಸಿದ್ದರೂ ಹೆದರದ ಆ ಶ್ವಾನ ತನ್ನ ಕಾರ್ಯವನ್ನು ಮುಂದುವರೆಸಿತು. ಅಷ್ಟೇ ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಯಿತು.
‘ಜೂಮ್’ ಎಂಬ ಆ ಶ್ವಾನವನ್ನು ತಕ್ಷಣ ಸೇನೆಯ ಪಶುವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಸೇನೆಯ ಚಿನಾರ್ ಕಾರ್ಪ್ಸ್ ವಿಭಾಗವು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ತನ್ನ ಶ್ವಾನ ಪಡೆಯ ಕೊಡುಗೆಯನ್ನು ಗೌರವಿಸಲು ಬ್ರೇವ್ಹಾರ್ಟ್ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದೆ.
ದಕ್ಷಿಣ ಕಾಶ್ಮೀರದಲ್ಲಿ ಜೂಮ್ ಅನೇಕ ಸಕ್ರಿಯ ಕಾರ್ಯಾಚರಣೆಗಳ ಭಾಗವಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಜೂಮ್ ಬಹಳ ಅತ್ಯುತ್ತಮ ತರಬೇತಿ ಪಡೆದ, ಉಗ್ರ ಮತ್ತು ಬದ್ಧತೆ ಹೊಂದಿರುವ ಶ್ವಾನ. ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಕೆಳಗುರುಳಿಸಲು ಅವರಿಗೆ ತರಬೇತಿ ನೀಡಲಾಗಿದೆ,” ಎಂದು ಅಧಿಕಾರಿ ಹೇಳಿದ್ದಾರೆ.
We wish Army assault dog 'Zoom' a speedy recovery. #Kashmir@adgpi@NorthernComd_IA pic.twitter.com/i1zJl0C2Gw
— Chinar Corps🍁 – Indian Army (@ChinarcorpsIA) October 10, 2022

























