ಕಾರ್ಕಳ: ಕೈ ನೋವಿನಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ.
ಪ್ರದೀಪ್ ರವರು 10 ವರ್ಷಗಳ ಕಾಲ ಮುಂಬೈ ಮತ್ತು ಪುಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಕಳೆದ ವರ್ಷದಿಂದ ಊರಿನಲ್ಲಿಯೇ ತನ್ನ ಅಣ್ಣ ಉಮೇಶ ಪೂಜಾರಿ ಜೊತೆ ನೆಲೆಸಿದ್ದರು.
ಕೊರೋನಾ ಸಮಯದಲ್ಲಿ ಪ್ರದೀಪ್ ಅವರ ಎಡ ಕೈಗೆ ಇಂಜೆಕ್ಷನ್ ಕೊಟ್ಟ ಪರಿಣಾಮ ಕೈನೋವು ಕಾಣಿಸಿಕೊಂಡಿದ್ದು, ಬಳಿಕ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಮನನೊಂದು ನಿನ್ನೆ ಮನೆಯ ಪಕ್ಕದಲ್ಲಿರುವ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























