ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸನ್ಮಯ ತೃತೀಯ ಸ್ಥಾನ ಗಳಿಸಿದ್ದಾರೆ.

ಈಕೆ ಕನ್ಯಾನದ ಈಶ್ವರ ಪ್ರಸಾದ್ ಮತ್ತು ಮಧುರಾ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

























