ವಿಟ್ಲ: ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಮೀಪದ ಚಂದಳಿಕೆ ಸಿ.ಪಿ.ಸಿ.ಆರ್.ಐ ತಿರುವಿನಲ್ಲಿ ನಡೆದಿದೆ.

ವಿಟ್ಲದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ.

ಮಂಜೇಶ್ವರ ನಿವಾಸಿಗಳಾದ ಅಬ್ದುಲ್ ಗಫುರ್ ಮತ್ತು ಹುಸೈನ್ ರವರು ಚಲಾಯಿಸುತ್ತಿದ್ದ ಕಾರು ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಿಂದಾಗಿ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಆಟೋ ರಿಕ್ಷಾ ಚಾಲಕ ಆಸ್ಪತ್ರೆಗೆ ಕರೆದೊಯ್ಯಿದಿದ್ದಾರೆ ಎಂದು ವರದಿಯಾಗಿದೆ.

























