ವಿಟ್ಲ: ಪುಣಚದಲ್ಲಿ ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಪಂಚಾಯತ್ ಸಿಬ್ಬಂದಿಯನ್ನು ವಜಾಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಹಾಗೂ ಸಾರ್ವಜನಿಕರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ವಿಶ್ವ ಹಿಂದೂ ಪರಿಷದ್ ಬಜರಂಗದಳ ಹಾಗೂ ಸಾರ್ವಜನಿಕರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರ ಮೂಲಕ ಮನವಿ ಸಲ್ಲಿಸಲಾಯಿತು.
ಬಂಟ್ವಾಳ ತಾಲೂಕಿನ ಪುಣಚ ಗ್ರಾಮ ಪಂಚಾಯತ್ ಸಿಬ್ಬಂದಿ ಉಸ್ಮಾನ್ ಎಂಬಾತ ಪುಣಚ ಪಂಚಾಯತ್ ಕಛೇರಿಯ ಅವರಣದಲ್ಲಿ ಯುವತಿಯೋರ್ವಳಿಗೆ ಮಾನಭಂಗ ಯತ್ನ ಮಾಡಿ ಬಂಧಿತನಾಗಿದ್ದು, ಸದ್ರಿ ಸಿಬ್ಬಂದಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣ ಸೇವೆಯಿಂದ ವಜಾಗೊಳಿಸಿ ಪಂಚಾಯತ್ ಕಛೇರಿಯಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣ ಮಾಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪಂಜ ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

























