ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಆಶ್ರಯದಲ್ಲಿ Fitness and Performance in Aviation ಬಗ್ಗೆ ಮಾಹಿತಿ ಕಾರ್ಯಾಗಾರ ಅ.12 ರಂದು ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷರಾದ ಜಯಂತ ನಡುಬೈಲು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಕ್ಯಾರಿರ್ ಫೌಂಡೇಶನ್ ನ ತರಬೇತುದಾರರಾದ ಜಯಶ್ರೀ ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಅನು ಭಾಗ್ಯಂತ್ ಭಾಗವಹಿಸಿ Aviation ಕೋರ್ಸ್ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳಿಗೆ ದೊರಕುವ ಪ್ರಯೋಜನಗಳು, ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಅನ್ಯ ಕಾಲೇಜಿನ ವಿದ್ಯಾರ್ಥಿಗಳು ಉಚಿತವಾಗಿ ಮಾಹಿತಿ ಕಾರ್ಯಾಗಾರದ ಸದುಪಯೋಗಪಡೆದುಕೊಂಡರು.

ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ. ಎ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
























