ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಈ ಘಟನೆಯನ್ನು ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ಖಂಡಿಸಿದೆ.
ಜಿಲ್ಲೆಯಲ್ಲಿ ಧರ್ಮರಕ್ಷಣೆಗೆ ಹಿಂದುತ್ವಕ್ಕೋಸ್ಕರ ಧ್ವನಿ ಎತ್ತುವ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕೊಲೆ ಮಾಡುವುದು, ಹಲ್ಲೆ, ಜೀವ ಬೆದರಿಕೆ ಬೆದರಿಸುವುದು ನಿರಂತರವಾಗಿ ನಡೆಯುತ್ತಿದ್ದು, ಇದೀಗ ಕರಾವಳಿ ಜಿಲ್ಲೆಯ ಹಿಂದುತ್ವದ ಪರವಾಗಿ ಧ್ವನಿ ಎತ್ತುವ ಶಾಸಕರಿಗೆ ಬೆದರಿಸುವ ಮೂಲಕ ಅವರ ಧ್ವನಿ ಅಡಗಿಸುವ ಷಡ್ಯಂತ್ರ ನಡೆದಿದ್ದು, ನಿನ್ನೆಯ ಘಟನೆಯಲ್ಲಿ ಭಾಗಿಯಾದ ಕಿಡಿಗೇಡಿಗಳನ್ನು ತಕ್ಷಣ ಬಂಧನ ಮಾಡಬೇಕು. ಸಿಸಿಟಿವಿ ಪುಟೇಜನ್ನ ಗಮನಿಸಿ ಹಿಂಬಾಲಿಸಿಕೊಂಡು ಬಂದ ವಾಹನವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.


























