ಪುತ್ತೂರು; ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರವರು ಏ.9ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ.
ವಿವಿಧ ಸಮಿತಿಗಳ ಸಭೆ ನಡೆಸಲಾಗುತ್ತದೆ ಎಂದು ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.