ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಈ ಘಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ರವರು ಖಂಡಿಸಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ನಿನ್ನೆ ತಡರಾತ್ರಿ ನಡೆದಿರುವ ಹಲ್ಲೆ ಯತ್ನ ಅತ್ಯಂತ ಖಂಡನೀಯ ಮತ್ತು ಶಿಕ್ಷಾರ್ಹವಾಗಿದೆ.
ಜನರಿಂದಲೇ ಆಯ್ಕೆಯಾಗಿರುವ ಒಬ್ಬ ಜನಪ್ರತಿನಿಧಿಯ ಮೇಲೆ ಆಗಿರುವ ಈ ಘಟನೆ ನಾಗರೀಕ ಸಮಾಜಕ್ಕೆ ಒಂದು ಕಪ್ಪು ಚುಕ್ಕೆಯಿದ್ದಂತೆ. ಆದ್ದರಿಂದ, ಸಂಬಂಧಪಟ್ಟವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ..


























