ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ತಿಳಿದು ಬಂದಿದೆ.
ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳ ವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


























