ಪುತ್ತೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧೀ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆ ಬಳ್ಳಾರಿಗೆ ತಲುಪಿದ್ದು, ಅ.15 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು ಭಾಗವಹಿಸಿ, ಸಮಾವೇಶದಲ್ಲಿ ಪಾಲ್ಗೊಂಡರು.

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ, ಮಂಜುನಾಥ ಗೌಡ ಮೊದಲಾದವರು ಯಾತ್ರೆಯಲ್ಲಿ ಪಾಲ್ಗೊಂಡರು.

























