ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ
ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ (52) ಅನಾರೋಗ್ಯದಿಂದ
ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತಃ ಬೆಳ್ಳಾರೆ ನಿವಾಸಿಯಾಗಿರುವ ಸುಭಾಷ್ ಶೆಣೈ ಅವರು ಬಿಸಿರೋಡ್ ಬಳಿ ಮನೆ ಮಾಡಿ ವಾಸವಾಗಿದ್ದರು. ಸುಭಾಷ್ ಅವರು ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದು, ಮಂಗಳೂರು ಸಂಚಾರಿ ಠಾಣೆ, ಬಂಟ್ವಾಳ, ಪುಂಜಾಲಕಟ್ಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಹೊಂದಿ, ನಂತರ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಎಎಸ್‌ಐ ಆಗಿದ್ದರು.
ವೇಣೂರು ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ವೇಣೂರು ಪೊಲೀಸ್ ಠಾಣೆಯಲ್ಲಿ ಸಹೋದ್ಯೋಗಿಗಳ ಜೊತೆ ಆಯುಧ ಪೂಜೆಯಲ್ಲಿ ಭಾಗವಹಿಸಿ ನಂತರ ಮನೆಗೆ ಹೋದ ಮರುದಿನವೇ ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೇ ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಮಗ, ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























