ಬಂಟ್ವಾಳ: ಜಾನುವಾರನ್ನು ಕಳವುಗೈದು ಅಕ್ರಮ ಸಾಗಾಟಕ್ಕೆ ಯತ್ನಿಸುತ್ತಿರುವುದನ್ನು ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಹಾಗೂ ಸಿಬ್ಬಂದಿಗಳು ಶನಿವಾರ ಬೆಳಗ್ಗೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಎಂಬಲ್ಲಿ ಪತ್ತೆಹಚ್ಚಿದ್ದು, ಓರ್ವನನ್ನು ಬಂಧಿಸಿ, ಎರಡು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತನನ್ನು ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ (47) ಎಂದು ಗುರುತಿಸಲಾಗಿದೆ.
ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿ ಸತ್ತಾರ್ ಹಾಗೂ ರಿಫಾಝ್ ಎಂಬವರನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದು, ಇವರಿಬ್ಬರು ತಲೆಮರೆಸಿಕೊಂಡಿದ್ದಾರೆ.

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಮಾಹಿತಿ ಮೇರೆಗೆ ಶುಕ್ರವಾರ ರಾತ್ರಿ ಗಸ್ತಿನಲ್ಲಿದ್ದ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿಗಳು
ಕಾರ್ಯಾಚರಣೆ ನಡೆಸಿದ್ದಾರೆ. ಓರ್ವ ಆರೋಪಿ ಹಾಗೂ ಆಕ್ಟಿವಾ ಹೋಂಡಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

























