ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಅ.15 ರಂದು ಮಧ್ಯರಾತ್ರಿ ವೇಳೆ ಕುವೆತ್ತಿಲ ಸಮೀಪ ನಡೆದಿದೆ.

ಘಟನೆಯಿಂದಾಗಿ ಬೈಕ್ ಸವಾರ ಜಹೀದ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ ಮತ್ತು ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ..

























