ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ಪೊಲೀಸರು 500ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ..
































