ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರವರು ಎ.9ರಂದು ದೇವಸ್ಥಾನಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ, ಜಯಾನಂದ ಕೆ, ನಿರಂಜನ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗಡೆಹಿತ್ಲು ವೇದಿಕೆಯಲ್ಲಿದ್ದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
