ಪುತ್ತೂರು: ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಅ.18 ರಂದು ಪುತ್ತೂರು ಸಮೀಪದ ಮೊಟ್ಟೆತ್ತಡ್ಕದಲ್ಲಿ ನಡೆದಿದೆ.

ಆಟೋರಿಕ್ಷಾದಲ್ಲಿ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಚಾಲಕ ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದಾಗಿ ಆಟೋ ರಿಕ್ಷಾವು ನಜ್ಜುಗುಜ್ಜಾಗಿದ್ದು, ನಿಯಂತ್ರಣ ತಪ್ಪಿ ಪಲ್ಟಿಯಾಯಿತೇ ಅಥವಾ ಯಾರದರೂ ಅಡ್ಡ ಬಂದರೇ ಎಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..



























