ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.25 ರಂದು ಸೂರ್ಯಗ್ರಹಣ ಇರುವುದರಿಂದ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅ. 26 ರಂದು ಶ್ರೀ ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗ್ರಹಣದ ಹಿನ್ನೆಲೆಯಲ್ಲಿ ಅ.26 ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.
ಅ.25 ರಂದು ಸಂಜೆ 5.11ಕ್ಕೆ ಗ್ರಹಣ ಸ್ಪರ್ಶವಾಗಲಿದ್ದು,ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ.



























