ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 15 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಬಂಧಿತ ಆರೋಪಿ.

ಅಕ್ಟೋಬರ್ 15 ರಂದು ಕಲ್ಲಡ್ಕದ ಪೂರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್ ಸತ್ತಾರ್ ಮತ್ತು ಮಹಮ್ಮದ್ ಇಸ್ಮಾಯಿಲ್ ಎಂಬುವರು ಕಳ್ಳತನ ಮಾಡಿದ್ದ ಎರಡು ಜಾನುವಾರುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.
ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ಸಂಬಂಧ ಇಬ್ಬರು ತಲೆಮರೆಸಿಕೊಂಡಿದ್ದಾರೆ.


























