ಪುತ್ತೂರು: ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗೊಂಡ ಘಟನೆ ಕಾವು ಸಮೀಪದ ಅಮ್ಚಿನಡ್ಕ ಮಳಿ ಎಂಬಲ್ಲಿ ನಡೆದಿದೆ.

ಆಂದ್ರಪ್ರದೇಶದ ವಿಶಾಖ ಪಟ್ಟಣ ನಿವಾಸಿ ಮಂಗಳೂರಿನ ಆಸ್ಪತ್ರೆಯೊಂದರ ವೈದ್ಯರು ಮತ್ತು ಇತರರು ಮಡಿಕೇರಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಕಾರ್ ಸ್ಕಿಡ್ ಆಗಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಿಂದಾಗಿ ಕಾರಿನಲ್ಲಿದ್ದ ವೈದ್ಯ ಮತ್ತು ಸಹ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

























