ಮಂಗಳೂರು: ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡು ಬಂದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾನುವಾರು ಸಾಗಾಟ ತಾತ್ಕಾಲಿಕ ನಿಷೇಧಿಸಿದೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ರವರು ಆದೇಶಿಸಿದ್ದಾರೆ.
ಅ.20 ರಿಂದ ನವೆಂಬರ್ 30ರ ವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ..




























