ಪುತ್ತೂರು: ತುಳುನಾಡಿನ ಕಾರಣಿಕ ಪುರುಷರಾದ ಪಡುಮಲೆ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಏ.22ರಿಂದ 24ರ ತನಕ ನಡೆಯಲಿರುವ ಪ್ರತಿಷ್ಟೆ ಮತ್ತು ಬ್ರಹ್ಮಕಲಶಾಭಿಷೇಕದ ಆಮಂತ್ರಣ ವಿತರಣಾ ಕಾರ್ಯಕ್ರಮವು ಎ.9ರಂದು ಬೆಳಿಗ್ಗೆ ಪುತ್ತೂರು ಪೇಟೆಯಲ್ಲಿ ನಡೆಯಿತು.
ಕೋಟಿ -ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ವತಿಯಿಂದ ನಮ್ಮ ಪಡುಮಲೆ ಎಂಬ ನಾಮಾಂಕಿತದೊಂದಿಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಚೆಂಡೆ ಸದ್ದಿನ ಮೆರವಣಿಗೆಯೊಂದಿಗೆ ದರ್ಬೆಯಿಂದ ಆರಂಭಗೊಂಡು ಬೊಳುವಾರು ತನಕ ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಆಮಂತ್ರಣ ಪತ್ರ ವಿತರಣೆಗೆ ಚಾಲನೆ ನೀಡಿದರು.ಪಡುಮಲೆ ಕೋಟಿ ಚೆನ್ನಯ ಜನ್ಮಸ್ವಾನ ಸಂಚಲನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸ್ವಾಗತಿಸಿದರು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯದರ್ಶಿ ಆರ್ ಸಿ ನಾರಾಯಣ, ಎಪಿಎಂಸಿ ಸದಸ್ಯ ಬೂಡಿಯಾರು ರಾಧಾಕೃಷ್ಣ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ, ಉದ್ಯಮಿ ಸೀತಾರಾಮ ರೈ, ನ್ಯಾಯವಾದಿ ಮಹೇಶ್ ಕಜೆ, ಸಂಚಲನಾ ಸಮಿತಿ ಗೌರವಾಧ್ಯಕ್ಷ ವಿಜಯ ಕುಮಾರ್ ಸೊರಕೆ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಪಟ್ಲ, ಪ್ರವರ್ತಕ ಚರಣ್ ಕೆ, ವೇದನಾಥ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಎ, ಕೃಷ್ಣ ಕುಮಾರ್, ಹಿಂದು ಜಾಗರಣ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ನ್ಯಾಯವಾದಿ ಚಿನ್ಮಯ್ ರೈ, ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ವಿಶ್ವನಾಥ ಗೌಡ ತೆಂಕಿಲ, ರತ್ನಾಕರ ನಾಕ್, ನವೀನ್ ಶೆಟ್ಟಿ, ಜಯಕುಮಾರ್ ರೈ, ಸೀತಾರಾಮ ಗೌಡ, ನೇಮಾಕ್ಷ ಸುವರ್ಣ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
