ಪುತ್ತೂರು: ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ರವರು ಅ.21 ರಂದು ವೀಕ್ಷಣೆ ಮಾಡಿದರು.

ರೈಲ್ವೇ ಅಂಡರ್ ಪಾಸ್ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಕೆಲಸ-ಕಾರ್ಯಗಳು ಯಾರ ರೀತಿ ನಡೆಯುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ ಯಾವ ರೀತಿಯಾಗಿ ಕೆಲಸಗಳು ನಡೆಯಲಿದೆ ಎಂಬ ಬಗ್ಗೆ ಶಾಸಕರು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸ್ಥಳೀಯ ನಗರಸಭೆ ಸದಸ್ಯ ಪ್ರೇಮ್ ಕುಮಾರ್, ಕೇಂದ್ರ ಸರಕಾರದ ದಿಶಾ ಸಮಿತಿಯ ನಾಮ ನಿರ್ದೇಶಕ ಸದಸ್ಯ ರಾಮ್ ದಾಸ್ ಹಾರಾಡಿ, ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.






























