ವಿಟ್ಲ: ಬೈಕ್-ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಅ.21 ರಂದು ರಾತ್ರಿ ಕನ್ಯಾನ ಸಮೀಪದ ಬಂಡಿತ್ತಡ್ಕ ಮಸೀದಿ ಮುಂಭಾಗದಲ್ಲಿ ನಡೆದಿದೆ.

ಘಟನೆಯಿಂದಾಗಿ ಬೈಕ್ ಸವಾರರ ಪೈಕಿ ಓರ್ವರಿಗೆ ಗಂಭೀರ ಗಾಯವಾಗಿದ್ದು, ಮತ್ತೋರ್ವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆನ್ನಲಾಗಿದೆ.

ಗಂಭೀರ ಗಾಯಗೊಂಡವರನ್ನು ಫ್ರೆಂಡ್ಸ್ ವಿಟ್ಲ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ..


























